....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಮೃತ್ಯು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿದ್ದ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಹರೀಶ್ ಅವರು ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕು ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ.

ಬುಧವಾರ ಸುಳ್ಯ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸಿ ಇಂದು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.

No Comments

Leave A Comment