ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಚಿಕ್ಕಮಗಳೂರು: ನೇಣು ಬಿಗಿದುಕೊಂಡು‌ ಸರ್ವೆ ಅಧಿಕಾರಿ ಶಿವಕುಮಾರ್‌ ಆತ್ಮಹತ್ಯೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಸರ್ವೆ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.

ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್‌ (45) ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ನೌಕರರ‌‌ ಸಂಘದ ನಿರ್ದೇಶಕರಾಗಿದ್ದ ಶಿವಕುಮಾರ್ ಅವರು ಮೂಡಿಗೆರೆ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆಯಷ್ಟೇ ಹೊಸ ಸಿಮ್‌ ಖರೀದಿ ಮಾಡಿದ್ದ ಶಿವಕುಮಾರ್‌ ಅವರು, 10 ವರ್ಷಗಳಿಂದ ಬಳಸುತ್ತಿದ್ದ‌ ಸಿಮ್ ಚೇಂಜ್‌ ಮಾಡಿದ್ದರು. ಸದ್ಯ ಸರ್ವೆ ಅಧಿಕಾರಿಯ ಆತ್ಮಹತ್ಯೆ ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ಮನೆ ಬಳಿ ಯಾರನ್ನೂ ಬಿಡದೆ ಬ್ಯಾರಿಕೇಡ್ ಹಾಕಿದ್ದು, ಆತ್ಮಹತ್ಯೆ ಕುರಿತು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment