ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ

ಬೆಂಗಳೂರು, ಫೆಬ್ರವರಿ 13: ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಇನ್ವೆಸ್ಟ್ ಕರ್ನಾಟಕ (Invest Karnataka) ಸಮಾವೇಶ ಆಯೋಜಿಸಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಕೂಡ ಲಭ್ಯವಾಗಿದೆ. ಸದ್ಯ ಇನ್ವೆಸ್ಟ್ ಕರ್ನಾಟಕಲ್ಲಿ ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್​​ ಮೂಲದ ವೋಲ್ವೋ ಕಂಪನಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಣೆ ಮಾಡಿದೆ.

ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನ ಮಾಡಿದೆ. ಆ ನಿಟ್ಟಿನಲ್ಲಿ 1,400 ಕೋಟಿ ರೂ. ಹೂಡಿಕೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದೆ. ಈ ವೇಳೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಒಡಂಬಡಿಕೆಗೆ ಸರ್ಕಾರ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೋ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದ್ದಾರೆ. ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವೋಲ್ವೋ ಸಂಸ್ಥೆ ಸಕ್ರಿಯವಾಗಿದೆ. ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

ವೋಲ್ವೋ ಕಂಪನಿ ಕನ್ನಡಿಗರಿಗೆ ಕೆಲಸ ಕೊಡಬೇಕು: ಸಿಎಂ
ಒಡಂಬಡಿಕೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತ್ತು. ಈಗ ನಮ್ಮಲ್ಲಿ ವೋಲ್ವೋ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೋ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು ಎಂದಿದ್ದಾರೆ.

ವೋಲ್ವೋ ಸಿಇಒ ಹೇಳಿದ್ದಿಷ್ಟು
ವೋಲ್ವೋ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, ಕರ್ನಾಟಕದಲ್ಲಿ ವೋಲ್ವೋ ಕಂಪನಿ ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್, ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್, ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗ ಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ ಎಂದು ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment