ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು (ಫೆಬ್ರವರಿ 13) ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು.
ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು. ಇತ್ತೀಚೆಗೆ ಶಿರೂರಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತಕ್ಕೆ ಮರುಗಿದ್ದರು.
ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ತಮಗೆ ನೀಡಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿರ್ಧರಿಸಿದ್ದರು. ಹಾಗೂ ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆಯನ್ನು ಕೂಡ ನೀಡಿದ್ದರು. ಇದೀಗ ಹಾಲಕ್ಕಿ ಸಮುದಾಯ ತುಳಸಿ ಗೌಡ ಬೆನ್ನಲ್ಲೇ ಇದೀಗ ಸುಕ್ರಿ ಬೊಮ್ಮಗೌಡ ಅವರನ್ನೂ ಸಹ ಕಳೆದುಕೊಂಡಿದೆ.