ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಪರಶುರಾಮ ಮೂರ್ತಿ ವಿವಾದ : ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ : ಉದಯ್ ಕುಮಾರ್ ಶೆಟ್ಟಿ

ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ ತೀರ್ಮಾನಕ್ಕೆ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಸಲಹೆ ನೀಡಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಶುರಾಮ ಮೂರ್ತಿ ವಿವಾದ ಅಂತ್ಯ ಯಾವಾಗ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಮೂರ್ತಿ ಅಸಲಿಯೋ, ನಕಲಿಯೋ ಎಂಬ ಬಗ್ಗೆ ಪೋಲಿಸ್ ತನಿಖೆ ಚಾಲ್ತಿಯಲ್ಲಿದೆ‌. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಅಧಿಕಾರಿಯ ಅಮಾನತುಗೊಳಿಸಲಾಗಿದ್ದು, ಶಿಲ್ಪಿ ಬಂಧಿಸ್ಪಟ್ಟಿದ್ದರು. ಹೀಗಾಗಿ ವಿಗ್ರಹ ಪ್ರತಿಷ್ಠಾಪನೆಯ ಆರಂಭದಲ್ಲಿಯೇ ನಡೆದಿರುವ ಅನಾಹುತಗಳಿಂದ ಜನರು ಭಯಭೀತರಾಗಿದ್ದಾರೆ ಎಂದು ಹೇಳಿದರು.

ಥೀಮ್ ಪಾರ್ಕ್ ನಿರ್ಮಾಣದ ಮೊದಲು ಉಮಿಕಲ್ ಬೆಟ್ಟದಲ್ಲಿ ದೈವ ಸಾನಿಧ್ಯವಿತ್ತು. ಅದನ್ನು ನೆಲಸಮ ಮಾಡಿ ಕಾಮಗಾರಿಗಳನ್ನು ನಡೆಸಲಾಗಿದೆ. ಇದೀಗ ಅದರ ದೋಷವೇ ಇಂತಹ ದುರಂತಗಳಿಗೆ ಕಾರಣವಾಗಿದ್ದಿರಬಹುದು ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಎಲ್ಲಾ ಪ್ರಶ್ನೆಗಳನ್ನು ಅಷ್ಟಮಂಗಲದ ಮೂಲಕ ಪರಿಹರಿಸಿಕೊಳ್ಳಬೇಕೆಂದು ನನ್ನ ಸಲಹೆ ಎಂದು ತಿಳಿಸಿದ್ದಾರೆ.

ಉದಯ್ ಕುಮಾರ್ ಶೆಟ್ಟಿ ಅವರ ಜೊತೆಗೆ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಇವರು ಉಪಸ್ಥಿತಿ ಇದ್ದರು.

No Comments

Leave A Comment