ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು ಲಕ್ನೋ: ಪ್ರಯಾಗ್‌ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಗು ಕೂಡ ಮೃತ ಪಟ್ಟಿದೆ. ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ ಮೀಟರ್ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ. Share this:Click to share on Facebook (Opens in new window)Click to share on X (Opens in new window)Click to share on Twitter (Opens in new window)Click to share on Pinterest (Opens in new window)Click to share on Telegram (Opens in new window)Click to share on Threads (Opens in new window)Click to share on WhatsApp (Opens in new window) Related