.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಭೀಕರ ರಸ್ತೆ ಅಪಘಾತ: ಮಹಾ ಕುಂಭಮೇಳದಲ್ಲಿ ಸ್ನಾನ ಮುಗಿಸಿ ಕಾಶಿಗೆ ತೆರಳುತ್ತಿದ್ದ ಬೀದರ್ ನ ಐವರು ಸಾವು

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.

ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ.

ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಗು ಕೂಡ ಮೃತ ಪಟ್ಟಿದೆ.

ಒಂದೇ ಗಾಡಿಯಲ್ಲಿ ಒಟ್ಟು 14 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು.

ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ‌ ಮೀಟರ್‌ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.

No Comments

Leave A Comment