ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ

ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಎರಡು ದಿನಗಳ ಕಾಲ ನಡೆಯುವ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಚಾಲನೆ ನೀಡಲಾಯಿತು.

ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ವೇದಿಕೆಯಲ್ಲಿ ಶುಕ್ರವಾರ ನಡೆದ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಬಿ. ಪ್ರಭಾಕರ ಶಿಶಿಲ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಕವಿ ಬಿ.ಆರ್. ಲಕ್ಷ್ಮಣರಾವ್ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಮಂಗಳೂರು ಕುಲಪತಿ ಡಾ. ಪಿ.ಎಲ್.ಧರ್ಮ, ಕಸಾಪ ದ.ಕ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಹಿರಿಯ ಸಾಹಿತಿ ಭುವನೇಶ್ವರಿ ಹೆಗಡೆ, ಕಸಾಪ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕನ್ನಡ ಮತ್ತು ಸಂಷಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ದ.ಕ. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರಾ, ಉಳ್ಳಾಲ ತಹಶೀಲ್ದಾರ್ ಪುಟ್ಟರಾಜು, ಉಳ್ಳಾಲ ತಾಪಂ ಇಒ ಗುರುದತ್ ಎಂ.ಎಸ್, ಕೊಣಾಜೆ ಗ್ರಾಪಂ ಅಧ್ಯಕ್ಷ ಗೀತಾ ದಾಮೋದರ ಕುಂದರ್, ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಮತ್ತಿತರರು ಉಪಸ್ಥಿತರಿದ್ದರು.

ಸಮ್ಮೇಳನ ಸಂಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಧನಂಜಯ ಕುಂಬ್ಳೆ ಸ್ವಾಗತಿಸಿದರು. ಕಸಾಪ ಮೂಡುಬಿದಿರೆ ತಾಲೂಕು ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮತ್ತು ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಕಾರ್ಯಕ್ರಮ ನಿರೂಪಿಸಿದರು.

kiniudupi@rediffmail.com

No Comments

Leave A Comment