...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು(ಇ೦ದು) ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ

ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ. 20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ.

ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ.

ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು. ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ತೀರ್ಥಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment