ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೇಶ ತೆಲಂಗಾಣ: ನಿರ್ಮಾಣ ಹಂತದ ಸುರಂಗ ಕುಸಿತ, 6 ಕಾರ್ಮಿಕರು ಸಿಲುಕಿರುವ ಶಂಕೆ

ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಶನಿವಾರ ಛಾವಣಿಯ ಒಂದು ಭಾಗ ಕುಸಿದು ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಶಂಕೆ ಸಾಧ್ಯತೆಯಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿರ್ಮಾಣ ಕಂಪನಿಯ ತಂಡ ಸುರಂಗದೊಳಗೆ ಹೋಗಿದ್ದು, ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು.

ಕಂಪನಿ ನೀಡಿದ ಮಾಹಿತಿಯ ಪ್ರಕಾರ ಆರರಿಂದ ಎಂಟು ಕಾರ್ಮಿಕರು ಸಿಲುಕಿರುವ ಸಾಧ್ಯತೆಯಿದೆ. ಕೆಲವು ಕಾರ್ಮಿಕರು ಕೆಲಸದ ಭಾಗವಾಗಿ 12-13 ಕಿ.ಮೀ ಒಳಗೆ ಹೋದಾಗ ಸುರಂಗದೊಳಗೆ ಮೇಲ್ಫಾವಣಿ ಕುಸಿದು ಈ ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಅಪಘಾತ ಸ್ಥಳಕ್ಕೆ ತಲುಪಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

No Comments

Leave A Comment