......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!
ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಹರಿದ ಬಸ್: ಇಬ್ಬರ ಸಾವು
ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಿನೇಶ್ ಎಂಬುವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಖಾಸಗಿ ಬಸ್ ಪಾದಾಯಾತ್ರಿಗಳ ಮೇಲೆ ಹರಿದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.