ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು, ಫೆಬ್ರವರಿ 23: ಲೋಕಾಯುಕ್ತ  ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ  ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.

ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡಿ ಹಣ ಸುಲಿಗೆ ಮಾಡುತ್ತಿದ್ದನು. ಲೋಕಾಯುಕ್ತ ಡಿವೈಎಸ್​ಪಿ ಬಸವರಾಜು ಆರ್. ಮಗದಮ್ ನೀಡಿದ ದೂರಿನ ಆಧಾರದ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಆರೋಪಿ ಮುರುಗಪ್ಪ ಅಪರಿಚಿತ ನಂಬರ್​ನಿಂದ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ, ಲೋಕಾಯುಕ್ತ ಡಿವೈಎಸ್​ಪಿ ಅಂತ ಪರಿಚಯ ಮಾಡಿಕೊಳ್ಳುತ್ತಿದ್ದನು. ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ಹಾಕಲಾಗುತ್ತಿದೆ ಅಂತ ಬೆದರಿಕೆ ಹಾಕುತ್ತಿದ್ದನು. ನಿಮ್ಮ ವಿರುದ್ಧ ಪ್ರಕರಣ ದಾಖಲಿಸಬಾರದು ಎಂದರೇ ಹಣ ನೀಡಿ ಅಂತ ಡಿಮ್ಯಾಂಡ್ ಮಾಡುತ್ತಿದ್ದನು. ಇದೇ ರೀತಿ ಮುರುಗಪ್ಪ ಹಲವು ಸರ್ಕಾರಿ ಅಧಿಕಾರಿಗಳ ಬೆದರಿಸಿ‌ ಹಣ ವಸೂಲಿ ಮಾಡಿದ್ದನು. ಇನ್ನು, ಬ್ಲ್ಯಾಕ್​ಮೇಲ್ ಆರೋಪದ ಮೇಲೆ ಮುರುಗಪ್ಪ ಹಲವು ಬಾರಿ ಜೈಲು ಸೇರಿದ್ದನು. ಬಿಡುಗಡೆಯಾದ ಬಳಿಕ ಮತ್ತೆ ಲೋಕಾಯುಕ್ತ ಹೆಸರಿನಲ್ಲಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದನು.

No Comments

Leave A Comment