.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು, ಫೆಬ್ರವರಿ 23: ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.
ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದನು. ಲೋಕಾಯುಕ್ತ ಡಿವೈಎಸ್ಪಿ ಬಸವರಾಜು ಆರ್. ಮಗದಮ್ ನೀಡಿದ ದೂರಿನ ಆಧಾರದ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಆರೋಪಿ ಮುರುಗಪ್ಪ ಅಪರಿಚಿತ ನಂಬರ್ನಿಂದ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ, ಲೋಕಾಯುಕ್ತ ಡಿವೈಎಸ್ಪಿ ಅಂತ ಪರಿಚಯ ಮಾಡಿಕೊಳ್ಳುತ್ತಿದ್ದನು. ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ಹಾಕಲಾಗುತ್ತಿದೆ ಅಂತ ಬೆದರಿಕೆ ಹಾಕುತ್ತಿದ್ದನು. ನಿಮ್ಮ ವಿರುದ್ಧ ಪ್ರಕರಣ ದಾಖಲಿಸಬಾರದು ಎಂದರೇ ಹಣ ನೀಡಿ ಅಂತ ಡಿಮ್ಯಾಂಡ್ ಮಾಡುತ್ತಿದ್ದನು. ಇದೇ ರೀತಿ ಮುರುಗಪ್ಪ ಹಲವು ಸರ್ಕಾರಿ ಅಧಿಕಾರಿಗಳ ಬೆದರಿಸಿ ಹಣ ವಸೂಲಿ ಮಾಡಿದ್ದನು. ಇನ್ನು, ಬ್ಲ್ಯಾಕ್ಮೇಲ್ ಆರೋಪದ ಮೇಲೆ ಮುರುಗಪ್ಪ ಹಲವು ಬಾರಿ ಜೈಲು ಸೇರಿದ್ದನು. ಬಿಡುಗಡೆಯಾದ ಬಳಿಕ ಮತ್ತೆ ಲೋಕಾಯುಕ್ತ ಹೆಸರಿನಲ್ಲಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದನು.