ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಧ್ಯ ಪ್ರದೇಶ ಬಳಿ ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್ ನ ಆರು ಮಂದಿ ದಾರುಣ ಸಾವು

ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಗಿನ ಜಾವ ಕ್ರೂಸರ್​ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಮುಕ್ತಾಯಗೊಳ್ಳಲು ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ಪುಣ್ಯಸ್ನಾನಕ್ಕೆ ತೆರಳುತ್ತಿದ್ದರು.

No Comments

Leave A Comment