ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಜಾರ್ಖಂಡ್: ಮೂವರು ಬುಡಕಟ್ಟು ಬಾಲಕಿಯರ ಮೇಲೆ 18 ಯುವಕರಿಂದ ಸಾಮೂಹಿಕ ಅತ್ಯಾಚಾರ!
ರಾಂಚಿ: ಫೆಬ್ರವರಿ 21 ರಂದು ತಡರಾತ್ರಿ ಜಾರ್ಖಂಡ್‌ನ ಖುಂಟಿ ರಾನಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಉಲಿಹಾಟು ಗ್ರಾಮದಲ್ಲಿ ಡಜನ್‌ಗಟ್ಟಲೆ ಅಪ್ರಾಪ್ತ ವಯಸ್ಕ ಯುವಕರು ಮೂವರು ಬುಡಕಟ್ಟು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಪೊಲೀಸರ ಪ್ರಕಾರ, ಉಲಿಹತುವಿನಿಂದ ನಿಚಿತ್‌ಪುರಕ್ಕೆ ಹೋಗುವ ದಾರಿಯಲ್ಲಿ ಕರೋ ನದಿಯ ಬಳಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದ ಐದು ಹುಡುಗಿಯರನ್ನು ದಾರಿಯಲ್ಲಿ 18 ಅಪ್ರಾಪ್ತ ಬಾಲಕರು ತಡೆದಿದ್ದಾರೆ. ಅವರಲ್ಲಿ ಕೆಲವರು ಮೂವರು ಬಾಲಕಿಯರ ಮೇಲೆ ಒಬ್ಬೊಬ್ಬರಾಗಿ ಅತ್ಯಾಚಾರ ಎಸಗಿದ್ದಾರೆ.
ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಹುಡುಗರು, ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ. ಹೇಗೋ ಹುಡುಗಿಯರು ಶನಿವಾರ ತಮ್ಮ ಮನೆಗೆ ತಲುಪಿ ತಮ್ಮ ಕುಟುಂಬಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ, ಕುಟುಂಬ ಸದಸ್ಯರು, ಗ್ರಾಮಸ್ಥರೊಂದಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೂವರು ಬಾಲಕಿಯರು ನೀಡಿದ ಹೇಳಿಕೆ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಖುಂಟಿ ಎಸ್‌ಪಿ ಎಲ್ಲಾ 18 ಆರೋಪಿ ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
“ಮೂವರು ಅಪ್ರಾಪ್ತ ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ವಿಷಯದ ಗಂಭೀರತೆಯನ್ನು ಗಮನಿಸಿ, ತನಿಖೆಯನ್ನು ತೀವ್ರಗೊಳಿಸಲಾಗಿದೆ. ಪ್ರಕರಣದಲ್ಲಿ ಎಲ್ಲಾ 18 ಆರೋಪಿ ಅಪ್ರಾಪ್ತರನ್ನು ಬಂಧಿಸಲಾಗಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ” ಎಂದು ಖುಂಟಿ ಎಸ್‌ಪಿ ಅಮನ್ ಕುಮಾರ್ ಹೇಳಿದ್ದಾರೆ.
ಆರೋಪಿಗಳು ಮತ್ತು ಸಂತ್ರಸ್ತ ಬಾಲಕಿಯರು ಇಬ್ಬರೂ ಒಂದೇ ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.