ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ರೇಣುಕಾಸ್ವಾಮಿ ಕೊಲೆ ಪ್ರಕರಣ: ಏ.8 ಕ್ಕೆ ದರ್ಶನ್ & ಗ್ಯಾಂಗ್ ವಿಚಾರಣೆ ಮುಂದೂಡಿಕೆ
ಬೆಂಗಳೂರು:ಫೆ.25:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏ.8 ಕ್ಕೆ ಕೋರ್ಟ್ ಮುಂದೂಡಿದೆ.
57ನೇ ಸೆಷನ್ಸ್ ಕೋರ್ಟ್ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ನ ವಿಚಾರಣೆ ನಡೆಯಿತು. ಕೋರ್ಟ್‌ನಲ್ಲಿ ಪೊಲೀಸರ ವಿರುದ್ಧ ದರ್ಶನ್ ಪರ ವಕೀಲರ ಆರೋಪ ಮಾಡಿದರು. ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಆಗಲು ಒತ್ತಡ ಹೇರುತ್ತಿದ್ದಾರೆ. ಬೇರೆ ಆರೋಪಿಗಳಿಗೆ ಮಾಫಿ ಸಾಕ್ಷಿ ಆಗಿ ಅಂತ ಒತ್ತಡ ಹೇರಲಾಗುತ್ತಿದೆ. ಹೈಕೋರ್ಟ್ ಅಲ್ಲಿ ಸಾಕಷ್ಟು ವಾದ ಮಂಡನೆ ಮಾಡಿದ್ದಾರೆ. ಹೀಗಿರುವಾಗ ಮಾಫಿ ಸಾಕ್ಷಿಯಾಗಲು ಒತ್ತಡ ಹಾಕಿದ್ದಾರೆ. ಇತರೆ ಆರೋಪಿಗಳು ತಪ್ಪು ಒಪ್ಪಿಕೊಂಡರೆ ಮಾಫಿ ಸಾಕ್ಷಿ ಮಾಡ್ತೀವಿ ಅಂತಿದ್ದಾರೆ ಎಂದು ಆರೋಪಿಸಿದ್ದಾರೆ.
ವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ. ಏಪ್ರಿಲ್ 8 ಕ್ಕೆ ವಿಚಾರಣೆ ಮುಂದೂಡಲಾಗಿದೆ.