ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
Bitcoin case: ಬೆಂಗಳೂರು ಸೇರಿ 60 ಕಡೆ ಸಿಬಿಐ ದಾಳಿ, ಶೋಧ
ನವದೆಹಲಿ: ಬಹುಕೋಟಿ ರೂಪಾಯಿ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬೆಂಗಳೂರು ಸೇರಿ ದೇಶದ 60 ಕಡೆಗಳಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಶೋಧ ನಡೆಸಿದೆ.
ಗೇನ್ ಬಿಟ್ ಕಾಯಿನ್ ಕ್ರಿಪ್ಟೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕ್ರಿಪ್ಟೊ ವ್ಯಾಲೆಟ್ಸ್, ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ ಇಮೇಲ್, ಕ್ಲೌಡ್ ಗಳಲ್ಲಿ ಇರುವ ಮಾಹಿತಿಗಳನ್ನು ಸಿಬಿಐ ಪಡೆದುಕೊಂಡಿದೆ.
ಪ್ರಕರಣ ಹಿನ್ನೆಲೆ
ಅಮಿತ್ ಭಾರದ್ವಾಜ್ ಮತ್ತು ಅಜಯ್ ಭಾರದ್ವಾಜ್ ಸೋದರರು ಗೇನ್ ಬಿಟ್ ಕಾಯಿನ್ ಜಾಲತಾಣ ಮೂಲಕ 2015ರಲ್ಲಿ ಪ್ರತಿ ತಿಂಗಳು ಶೇ. 10ರಷ್ಟು ಲಾಭ ಮಾಡಿಕೊಡುವುದಾಗಿ ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದರು. ಆರಂಭದಲ್ಲಿ ಹೂಡಿಕೆದಾರರಿಗೆ ಲಾಭಾಂಶ ನೀಡಲಾಗುತ್ತಿತ್ತು. ಅನಂತರ ದಿನಗಳಲ್ಲಿ ಲಾಭಾಂಶ ನೀಡಲು ಸಾಧ್ಯವಾಗದಿದ್ದರಿಂದ ಹೂಡಿಕೆದಾರರಿಗೆ ನಷ್ಟ ಉಂಟಾಯಿತು ದೇಶಾದ್ಯಂತ ಈ ಕಂಪೆನಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.