ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೇತಗಾನಹಳ್ಳಿ ಬಳಿ ಭೂ ಕಬಳಿಕೆ ಆರೋಪ: HDKಗೆ ಪ್ರಾಸಿಕ್ಯೂಷನ್ ಸಂಕಷ್ಟ, ರಾಜ್ಯಪಾಲರ ಅಂಗಳದಲ್ಲಿ ಮೈನಿಂಗ್ ಕೇಸ್

ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಾಸಿಕ್ಯೂಷನ್ ಅನುಮತಿಗೆ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಕಳೆದ ಏಳು ತಿಂಗಳ ಹಿಂದೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ವೇಳೆ ಕನ್ನಡದಿಂದ ಇಂಗ್ಲಿಷ್​ಗೆ ಭಾಷಾಂತರ ಮಾಡಲು ರಾಜ್ಯಪಾಲರು ಸೂಚನೆ ನೀಡಿದ್ದರು. ಇದರಂತೆ 5 ಸಾವಿರ ಪುಟಗಳ ಭಾಷಾಂತರ ಮಾಡಿ, ಮತ್ತೊಮ್ಮೆ ಪ್ರಾಸಿಕ್ಯೂಷನ್​​ಗೆ ವಿಶೇಷ ತನಿಖಾ ತಂಡ ಅನುಮತಿ ಕೇಳಿದೆ.

ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್‌ಎಸ್‌ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ.

2011ರಲ್ಲಿ ಲೋಕಾಯುಕ್ತರಾಗಿದ್ದ ಎನ್‌. ಸಂತೋಷ್‌ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿಯಲ್ಲಿನ ಉಲ್ಲೇಖ ಆಧರಿಸಿ ಲೋಕಾಯುಕ್ತದ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್‌ಐಟಿ ಅಧಿಕಾರಿಗಳು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ 2023ರ ನವೆಂಬರ್‌ 21ರಂದು ಮೊದಲ ಬಾರಿಗೆ ಪ್ರಸ್ತಾವ ಸಲ್ಲಿಸಿದ್ದರು.

ಮಾರಸ್ವಾಮಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳನ್ನು ಒದಗಿಸುವಂತೆ ಸೂಚಿಸಿ ರಾಜ್ಯಪಾಲರು 2024ರ ಜುಲೈ ತಿಂಗಳಲ್ಲಿ ಎಸ್‌ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ರಾಜ್ಯಪಾಲರು ಕೋರಿದ್ದ ಸ್ಪಷ್ಟನೆಗಳೊಂದಿಗೆ 2024ರ ಆಗಸ್ಟ್‌ನಲ್ಲಿ ಹೊಸ ಪ್ರಸ್ತಾವ ಸಲ್ಲಿಸಿದ್ದ ತನಿಖಾ ತಂಡ, ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಮತ್ತೆ ಕೋರಿತ್ತು. ಆಗ ಪ್ರತಿಕ್ರಿಯಿಸಿದ್ದ ರಾಜ್ಯಪಾಲರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ಹಾಗೂ ಕರಡು ಆರೋಪಪಟ್ಟಿಯ ಪ್ರತಿಯನ್ನು ಇಂಗ್ಲಿಷ್‌ಗೆ ಭಾಷಾಂತರಿಸಿ ಸಲ್ಲಿಸುವಂತೆ ಸೂಚಿಸಿದ್ದರು.

ರಾಜ್ಯಪಾಲರ ಸೂಚನೆಯಂತೆ ಹಲವು ಸಾವಿರ ಪುಟಗಳಷ್ಟು ದಾಖಲೆಗಳನ್ನು ಇಂಗ್ಲಿಷ್‌ಗೆ ಭಾಷಾಂತರಿಸಿದ್ದು, ಅವುಗಳೊಂದಿಗೆ 2025ರ ಜನವರಿ 21ರಂದು ರಾಜಭವನಕ್ಕೆ ಹೊಸ ಪ್ರಸ್ತಾವ ಸಲ್ಲಿಸಲಾಗಿದೆ.

kiniudupi@rediffmail.com

No Comments

Leave A Comment