ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ವಿವಿಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ: ಕಲಬುರಗಿ ಪೊಲೀಸರಿಂದ ಕಿಂಗ್ಪಿನ್ ಬಂಧನ
ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ನಲ್ಲಿ ಬಂಧಿಸಿದ್ದಾರೆ.
ರಾಜೀವ ಸಿಂಗ್ ಆರೋರಾ ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್ಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ.
ಸದ್ಯ ಬಂಧಿತನಿಂದ ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್ ಟಾಪ್, 1 ಪ್ರಿಂಟರ್, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 85 ಬ್ಯಾಂಕ್ ಅಕೌಂಟ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.