ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ವಕೀಲರು ಹಾಗೂ ನ್ಯಾಯಾಧೀಶರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಕಾನೂನು ವ್ಯವಸ್ಥೆಯಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿ-ಹೈಕೋರ್ಟ್ ನ್ಯಾ.ಕಾಮೇಶ್ವರ ರಾವ್

ಉಡುಪಿ:ವಕೀಲರು ಹಾಗೂ ನ್ಯಾಯಾಧೀಶರು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಕಾನೂನು ವ್ಯವಸ್ಥೆಯಲ್ಲಿ ಆರೋಗ್ಯಕರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರಾಜ್ಯ ಕಾನೂನು ಸೇವಾ ಪಾಧಿಕಾರದ ಕಾರ್ಯಾಧ್ಯಕ್ಷ ಹಾಗೂ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾ|ಕಾಮೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಎಮ್‌ಜಿಎಮ್ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನದ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ವಕೀಲರು ಪ್ರಕರಣಗಳನ್ನು ಜಯಿಸಲು ಸಾಕಷ್ಟು ಅಧ್ಯಯನ, ಚಿಂತನೆ ನಡೆಸಬೇಕಾಗುತ್ತದೆ. ಅಂತೆಯೇ ನ್ಯಾಯಾಧೀಶರು ಉತ್ತಮ ತೀರ್ಪು ನೀಡಲು ಅಧ್ಯಯನ ನಡೆಸಬೇಕಾಗುತ್ತದೆ. ಆದರಿಂದ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾರೆ. ಅದನ್ನು ನಿರ್ವಹಿಸಲು ಕ್ರೀಡೆ ಸುಲಭ ಮಾರ್ಗ. ವಕೀಲರ ಸಂಘ ಕ್ರೀಡಾ ಪಂದ್ಯಾಟಗಳನ್ನು ನಿರಂತರವಾಗಿ ನಡೆಸುತ್ತಿರಬೇಕು. ಅದರಿಂದ ರಾಜ್ಯ, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ವಕೀಲರ ನಡುವೆ ಪರಸ್ಪರ ಸಮನ್ವಯ ಹಾಗೂ ಸೌಹಾರ್ದ ಬೆಳೆಯುತ್ತದೆ ಎಂದರು.

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ನ್ಯಾರಾಜೇಶ್ ರೈ.ಕೆ.ಮಾತನಾಡಿ, ಕ್ರೀಡೆ ಮತ್ತು ನ್ಯಾಯಾಂಗ ವ್ಯವಸ್ಥೆ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ವಕೀಲರು ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ಅವರಲ್ಲಿನ ಕ್ರಿಯಾಶೀಲತೆ ಹೆಚ್ಚಾಗುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾಇ.ಎಸ್.ಇಂದಿರೇಶ್ ಮಾತನಾಡಿ, ಪ್ರತಿನಿತ್ಯ ಕನಿಷ್ಠ ವ್ಯಾಯಾಮ ಮಾಡಬೇಕಾಗುತ್ತದೆ. ಅದು ಆರೋಗ್ಯಕ್ಕೂ ಉತ್ತಮ ಮತ್ತು ವಕೀಲ ವೃತ್ತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕಾರಿ ಎಂದರು.

 

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಮ್. ಎಲ್.ರಘುನಾಥ್, ಮಾಹೆ ಸಹ ಕುಲಾಧಿಪತಿ ಡಾ.ಎಚ್. ಎಸ್.ಬಲ್ಲಾಳ್, ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್, ವಕೀಲರ ಸಂಘದ ಉಪಾಧ್ಯಕ್ಷ ಮತ್ತು ಕ್ರೀಡಾಕೂಟದ ಸಂಚಾಲಕ ಮಿತ್ರಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಹಿರಿಯ ವಕೀಲರಾದ ವಿಜಯ ಕುಮಾರ್ ಶೆಟ್ಟಿ ನಾಡಗೀತೆ ಹಾಡಿದರು. ಉಡುಪಿ ವಕೀಲರಸಂಪರ ಅಧ್ಯಕ್ಷ ರೆನೋಲ್ಡ್ ಪ್ರವೀಣ್‌ ಕುಮಾರ್ ರವರು ಸ್ವಾಗತಿಸಿ, ರಾಜೇಶ್ ಎ.ಆ‌ರ್ ವಂದಿಸಿದರು. ಮೇರಿ ಎ.ಆರ್.ಶ್ರೇಷ್ಠಾ ನಿರೂಪಿಸಿದರು.

No Comments

Leave A Comment