ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬೆಂಗಳೂರು:ಮಾರ್ಚ್, 07: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಇಡಿ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್ಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಇಬ್ಬರು ಹೈಕೋರ್ಟ್ ಮೊರೆ ಹೋಗಿದ್ದು, ಇಂದು (ಮಾರ್ಚ್ 07) ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಸಹಿತ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನಿರಾಳಾಗಿದ್ದಾರೆ.
ಕರಣದ ಹಿನ್ನಲೆ
ಮುಡಾ ಹಗರಣ ಪ್ರಕರಣದಲ್ಲಿ ಇಡಿ ಪ್ರವೇಶಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯನವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸೇರಿದಂತೆ ಇತರರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ಅವರು ಇಬ್ಬರು ಪ್ರತ್ಯೇಕವಾಗಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಇಡಿ ಸಮನ್ಸ್ಗೆ ತಡೆಯಾಜ್ಞೆ ನೀಡಿತ್ತು. ಇದೀಗ ಕೋರ್ಟ್ ಇಡಿ ಸಮನ್ಸ್ ಅನ್ನೇ ರದ್ದು ಮಾಡಿ ಆದೇಶಿಸಿದೆ. ಇದರಿಂದ ಇಬ್ಬರು ಇಡಿ ವಿಚಾರಣೆಯಿಂದ ಬಚಾವ್ ಆಗಿದ್ದು, ಸಿಎಂ ಸಿದ್ದರಾಮಯ್ಯ ನಿರಾಳರಾಗಿದ್ದಾರೆ.
ಪಾರ್ವತಿ ಅವರು ಅಕ್ಟೋಬರ್ 1, 2024 ರಂದು ವಿವಾದಿತ ಸೈಟ್ ಗಳನ್ನು ಹಿಂದಿರುಗಿಸಿದ್ದಾರೆ|ಮುಡಾದ 14 ಸೈಟ್ ಗಳಲ್ಲದೇ 1708 ಸೈಟ್ ಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಈಗಾಗಲೇ 160 ಸೈಟ್ ಗಳನ್ನು ಇಡಿ ತಾತ್ಕಾಲಿಕ ಜಪ್ತಿ ಮಾಡಿದೆ. ತನ್ನ ಕಾರ್ಯವ್ಯಾಪ್ತಿ ಮೀರಿ ಇಡಿ ಪರ್ಯಾಯ ತನಿಖೆ ನಡೆಸುತ್ತಿದೆ. ಇಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಹಲವು ಅಂಶಗಳನ್ನು ಪ್ರಸ್ತಾಪಿಸಿದೆ. ಭೂಸ್ವಾಧೀನ, ಭೂಪರಿವರ್ತನೆ ಇತ್ಯಾದಿಗಳ ಬಗ್ಗೆಯೂ ತನಿಖೆ ನಡೆಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಯಲ್ಲಿ ಇಡಿ ಪ್ರವೇಶಿಸಿದೆ. ಮುಡಾಗೆ ಹಿಂತಿರುಗಿಸಿರುವ 14 ಸೈಟ್ಗಳನ್ನು ಇಡಿ ಜಪ್ತಿ ಮಾಡಿಲ್ಲ. ಆದರೆ ಇತರೆ 160 ಸೈಟ್ ಗಳನ್ನು ಇಡಿ ಜಪ್ತಿ ಮಾಡಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲವೆಂದು ವರದಿ ಸಲ್ಲಿಸಿದ್ದಾರೆ ಎಂದು ಸಿಎಂ ಪತ್ನಿ ಪಾರ್ವತಿ ಪರ ಸಂದೇಶ್ ಚೌಟ ವಾದ ಮಂಡಿಸಿದ್ದರು.