ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಸೇಡಂ ಬಳಿ ಎರಡು ಬೈಕ್ಗಳ ಭೀಕರ ಅಪಘಾತ: ನಾಲ್ವರು ಯುವಕರ ದುರಂತ ಅಂತ್ಯ
ಕಲಬುರಗಿ, ಮಾರ್ಚ್ 07: ಎರಡು ಬೈಕ್ಗಳು (bike) ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ (ಟಿ) ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಸಿದ್ದು, ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತರು. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿವೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಸಿಕೊಂಡಿದ್ದಾರೆ.
ರೌಡಿಶೀಟರ್ ಬರ್ಬರ ಹತ್ಯೆ ಮಾಡಿದ್ದ ಆರೋಪಿ ಬಂಧಿನ
ರೌಡಿ ಶೀಟರ್ ಬರ್ಬರ ಹತ್ಯೆ ಮಾಡಿದ್ದ ಆರೋಪಿಯನ್ನು ಕಲಬುರಗಿಯ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಾನಂದ ಅಲಿಯಾಸ ಶಿವು ಕುಂಬಾರ ಬಂಧಿತ ಆರೋಪಿ. ಮಾ.4 ರಂದು ನಸುಕಿನ ಜಾವ ರೌಡಿ ಶೀಟರ್ ವಿರೇಶ್ ಅಲಿಯಾಸ ಸಾರಥಿಯನ್ನ ಬರ್ಬರ ಹತ್ಯೆ ಮಾಡಿದ್ದ.
ರಾತ್ರಿ ಎಣ್ಣೆ ಪಾರ್ಟಿ ಮಾಡಿ ನಸುಕಿನ ಜಾವ ಹತ್ಯೆ ಮಾಡಲಾಗಿತ್ತು. ಕಬ್ಬಿಣದ ರಾಡ್ನಿಂದ ಬರ್ಬರವಾಗಿ ಶಿವು ಹತ್ಯೆ ಮಾಡಿದ್ದ. 50 ಸಾವಿರ ರೂ ಹಣ ನೀಡುವಂತೆ ರೌಡಿಶೀಟರ್ ಪೀಡಿಸಿದ್ದ. ಹಾಗಾಗಿ ಕೊಪಗೊಂಡು ರೌಡಿಶೀಟರ್ನನ್ನೆ ಶಿವು ಹತ್ಯೆ ಮಾಡಿದ್ದ. ಕಲಬುರಗಿಯ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು
ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿ ಬಳಿ ನಡೆದಿದೆ. ಅಲಪನಹಳ್ಳಿ ಗ್ರಾಮದ ನಿವಾಸಿ ಲಿಂಗಪ್ಪ (50) ಮೃತ ಬೈಕ್ ಸವಾರ.
ಲಿಂಗಪ್ಪ ಐಸ್ ಕ್ರೀಂ ಮಾರಾಟ ಮಾಡಲು ಹೋಗುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಚಾಲಕನ ಅತಿವೇಗದ ಚಾಲನೆಯಿಂದ ಬೈಕ್ ಮೇಲೆ ಹರಿದು ಸವಾರ ಮೃತಪಟ್ಟಿದ್ದಾನೆ. ಮಣ್ಣು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಸಮೇತ ಚಾಲಕ ಪರಾರಿ ಆಗಿದ್ದಾನೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ವೈದ್ಯ ಸಾವು
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ವೈದ್ಯ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಡಾ.ಜಯರಾಂ ನಾಯ್ಕ್(53) ಮೃತ ವ್ಯಕ್ತಿ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.