ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
11 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಯುವಕ ಅರೆಸ್ಟ್
ಪಣಜಿ/ಬೆಂಗಳೂರು:ಮಾರ್ಚ್, 09: 11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಗೋವಾ ಪೊಲೀಸರು ಶನಿವಾರ (ಮಾರ್ಚ್.08) ಬಂಧಿಸಿದ್ದಾರೆ. ಯುವಕನ ಬಳಿ ಇದ್ದ 11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ. ಗೋವಾ ಪೊಲೀಸರ ಪ್ರಕಾರ, ಮಾದಕ ದ್ರವ್ಯ ವಿರುದ್ಧ ನಡೆಸಿದ ಕಾರ್ಯಾಚರಣೆ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಡೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದು ಇದೇ ಮೊದಲಾಗಿದೆ.
ಯುವಕ ನೇಪಾಳದಿಂದ ಭಾರತಕ್ಕೆ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದನು. ಈತನ ಚಲನವಲನದ ಮೇಲೆ ರಾಜ್ಯ ಗುಪ್ತಚರ ಇಲಾಖೆ ಕಳೆದೊಂದು ತಿಂಗಳಿನಿಂದ ನಿಗಾ ಇಟ್ಟಿತ್ತು. ಮಾದಕ ದ್ಯವ್ಯ ತೆಗೆದುಕೊಂಡು ಗೋವಾಕ್ಕೆ ಬಂದಿದ್ದ ಯುವಕನ ಬಗ್ಗೆ ರಾಜ್ಯ ಗುಪ್ತರಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧರಿಸಿ, ಗುಯಿರಿಮ್‌ನಲ್ಲಿ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಗುಪ್ತಾ ಮಾತನಾಡಿ, ಮಾದಕ ದ್ರವ್ಯ ವಿರುದ್ಧ ನಡೆಸಿದ್ದ ಕಾರ್ಯಾಚರಣೆ ಇತಿಹಾಸದಲ್ಲೇ ಇದುವರೆಗಿನ ಅತಿದೊಡ್ಡ ಮಾದಕ ದ್ರವ್ಯ ಜಪ್ತಿ ಇದಾಗಿದೆ. ಯುವಕನ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.