ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, ಇಬ್ಬರು ಸಜೀವ ದಹನ

ಚಿಕ್ಕಬಳ್ಳಾಪುರ:ಮಾರ್ಚ್​ 09: ಖಾಸಗಿ ಬಸ್‌ವೊಂದು ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಜೀವದಹನವಾಗಿದ್ದು, ಆಂಧ್ರ ಮೂಲದ ಧನಂಜಯ ರೆಡ್ಡಿ(31), ಕಲಾವತಿ(35) ಮೃತರು ಎಂದು ಗುರುತಿಸಲಾಗಿದೆ. ಇನ್ನು ಕಾರಿನಲ್ಲಿದ್ದ ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭೀಕರ ಅಪಘಾತದಲ್ಲಿ ಕಾರು ಬೆಂಕಿಯಿಂದ ಹೊತ್ತಿ ಉರಿದಿದ್ದರೆ, ಬಸ್​​ ಪಲ್ಟಿಯಾಗಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮದನಪಲ್ಲಿ ನಿವಾಸಿಗಳಾದ ಇಬ್ಬರು ಸುಟ್ಟು ಕರಕಲಾಗಿದ್ದರೆ, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಖಾಸಗಿ ಬಸ್​ನಲ್ಲಿ ಪ್ರಯಾಣಿಕರು ಬಚಾವಾಗಿದ್ದಾರೆ.

No Comments

Leave A Comment