.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಚಿತ್ರದುರ್ಗ: ಲಾರಿ, ಇನೊವಾ ಕಾರು ನಡುವೆ ಭೀಕರ ಅಪಘಾತ: ಐವರು ದುರ್ಮರಣ

ಚಿತ್ರದುರ್ಗ:ಮಾರ್ಚ್​ 09: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಮಾರ್ಚ್​ 09 ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50), ನಿರ್ದೇಚಿದಂಬರಾಚಾರ್(52)  ಮೃತರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಕಾರಿನಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪ್ರಸಾದ ಪತ್ತೆಯಾಗಿದೆ. ಹೀಗಾಗಿ ಅವರು ಕಾರಿನಲ್ಲಿ ಸವದತ್ತಿಯ ರೇಣುಕಾ ಯಲ್ಲಮ್ಮ‌ ದೇಗುಲಕ್ಕೆ ಹೋಗಿ ಹಿಂದಿರುಗುತ್ತಿದ್ದರು ಎನ್ನಲಾಗಿದೆ.  ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಮೂಲದ ಇನೊವಾ ಕಾರು, ತಮಿಳುನಾಡು ಪಾಸಿಂಗ್ ಇರುವ ಲಾರಿ ಹಿಂಬದಿಗೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಪೃತಪಟ್ಟಿದ್ದಾರೆ. ಇನ್ನು ಗುದ್ದಿದ ರಭಸಕ್ಕೆ ಇನ್ನೊವಾ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

No Comments

Leave A Comment