ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಹಿರಿಯ ವಕೀಲರ ಆದರ್ಶ ಕಿರಿಯರಿಗೆ ಪ್ರೇರಣೆ: ನ್ಯಾ.ಸಿ.ಎಂ.ಜೋಶಿ
ಉಡುಪಿ, ಮಾ.10: ಹಿರಿಯ ವಕೀಲರ ಆದರ್ಶಗಳೇ ಕಿರಿಯ ವಕೀಲರಿಗೆ ಪ್ರೇರಣೆ ನೀಡುತ್ತವೆ. ಆ ವ್ಯಕ್ತಿ ಗಳ ಆದರ್ಶಗಳನ್ನು ಅಳವಡಿಸಿಕೊಂಡು ವೃತ್ತಿಯನ್ನು ಮುಂದುವರಿಸಿದರೇ ಯಶಸ್ಸು ಲಭಿಸಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ನ್ಯಾ.ಸಿಎಂ.ಜೋಶಿ ಹೇಳಿದ್ದಾರೆ.
ಉಡುಪಿ ವಕೀಲರ ಸಂಘದ ವತಿಯಿಂದ ಸೋಮವಾರ ಉಡುಪಿಯ ಹಿರಿಯ ನ್ಯಾಯವಾದಿ ದಿ.ವಿ.ಮೋಹನ್ ದಾಸ್ ಶೆಟ್ಟಿಯವರ ಭಾವಚಿತ್ರ ಅನಾವರಣಗೊಳಿಸಿ ಅವರು ಮಾತನಾಡುತಿದ್ದರು.
ವೃತ್ತಿಯಲ್ಲಿ ಆದರ್ಶ ಮಾತ್ರ ಇದ್ದರೇ ಸಾಲದು, ನೈಪುಣ್ಯತೆಯೂ ಅಗತ್ಯ. ಇದನ್ನು ಸಮಾಜದ ಒಳಿತಿ ಗಾಗಿ ಉಪಯೋಗಿಸಿಕೊಳ್ಳಬೇಕು. 50 ವರ್ಷದ ಹಿಂದಿನ ವಕೀಲ ವೃತ್ತಿಗೂ, ಇಂದಿನ ಕಾಲಘಟ್ಟದ ವೃತ್ತಿಗೂ ಬಹಳಷ್ಟು ವ್ಯತ್ಯಾಸ ಇದೆ. ಗುರು ಮುಖೇನ ಅನೇಕ ಸಂಗತಿಗಳನ್ನು ಕಲಿಯಬೇಕು. ಶಾಲಾ, ಕಾಲೇಜುಗಳಲ್ಲಿ ಕೌಶಲ್ಯಗಳನ್ನು ಹೇಳಿಕೊಡಲು ಸಾಧ್ಯವಿಲ್ಲ. ಸಾಧ್ಯವಿಲ್ಲ. ಇವೆಲ್ಲವೂ ಹಿರಿಯ ವಕೀಲರ ಮೂಲಕ ಕಲಿಯವಂತಹದ್ದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್ ಮಾತನಾಡಿ, ವಕೀಲ ವೃತ್ತಿಯ ಬಗ್ಗೆ ಎಲ್ಲರಿಗೂ ಪ್ರತಿಯೊಂದು ಕನಸು ಗಳಿರುತ್ತವೆ. ದಿನಗಳು ಕಳೆದಂತೆ ವಿವಿಧ ಸಾಧನೆಗಳುಮಾಡಲು ಸಾಧ್ಯವಿದೆ.ಉತ್ಕೃಷ್ಟ ಗುಣಗಳನ್ನು ಅಳವಡಿಸಿಕೊಂಡಾಗ ಸಾರ್ಥಕ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ದಿ.ಮೋಹನ್‌ದಾಸ್ ಶೆಟ್ಟಿಯವರ ಪತ್ನಿ ರಶ್ಮಿ ಎಂ.ಶೆಟ್ಟಿ ಉಪಸ್ಥಿತರಿದ್ದರು. ನ್ಯಾಯವಾದಿ ಆನಂದ್ ಮಡಿವಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ದಿ.ಮೋಹನ್‌ದಾಸ್ ಶೆಟ್ಟಿಯವರ ಪತ್ನಿ ರಶ್ಮಿ ಎಂ.ಶೆಟ್ಟಿ ಉಪಸ್ಥಿತರಿದ್ದರು. ನ್ಯಾಯವಾದಿ ಆನಂದ್ ಮಡಿವಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್.ಎ.ಆರ್ ವಂದಿಸಿದರು. ನ್ಯಾಯವಾದಿ ಸಹನಾ ಕುಂದರ್ ಕಾರ್ಯಕ್ರಮ ನಿರೂಪಿಸಿದರು.