ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಪಾಕಿಸ್ತಾನದಲ್ಲಿ ರೈಲಿನ ಮೇಲೆ ಉಗ್ರರ ದಾಳಿ- 155 ಪ್ರಯಾಣಿಕರ ರಕ್ಷಣೆ, 27 ಉಗ್ರರ ಹತ್ಯೆ

ಇಸ್ಲಾಮಾಬಾದ್:ಮಾ,12.ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈ ಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು ಗಾಯಗೊಂಡಿದ್ದು, ಅವರಿಗೆ ವೈ ದ್ಯಕೀಯ ನೆರವು ಒದಗಿಸಲಾಗಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂ ದ ಪೆಶಾವರಕ್ಕೆ ತೆರಳುತ್ತಿದ್ದ ಒಂಬತ್ತು ಬೋಗಿಗಳಿರುವ ಜಾಫರ್ ಎಕ್ಸ್ಪ್ರೆಸ್ ರೈ ಲಿನಲ್ಲಿ ಸುಮಾರು 400 ಪ್ರಯಾಣಿಕರು ಸಂಚರಿಸುತ್ತಿದ್ದರು. ಗಡಾಲರ್ ಮತ್ತು ಪೆಹ್ರೊ ಕುನ್ರಿ ಕಣಿವೆ ಪ್ರದೇಶದ ಸಮೀ ಪದ ಸುರಂಗದಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ್ದರು. ಬಲೂಚಿಸ್ತಾನ್ ಲಿಬರೇ ಶನ್ ಆರ್ಮಿ (ಬಿಎಲ್ಎ) ದಾಳಿಯ ಹೊಣೆ ಹೊತ್ತುಕೊಂಡಿತ್ತು.

ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯ ನಡುವೆಯೂ ಮಹಿಳೆಯರು ಹಾಗೂ ಮಕ್ಕಳು ಸೇ ರಿದಂ ತೆ 155 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಉಗ್ರರ ವಿರುದ್ಧದ ಕಾರ್ಯಾ ಚರಣೆ ಈಗಲೂ ಮುಂದುವರಿದಿದ್ದು, ಸುರಂಗವನ್ನು ಭದ್ರತಾ ಪಡೆ ಸುತ್ತುವರಿದಿದೆ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ.

No Comments

Leave A Comment