ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
ನವದೆಹಲಿ:ಮಾರ್ಚ್, 26. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.
ಉಚ್ಛಾಟನೆ ಆದೇಶದಲ್ಲೇನಿದೆ?
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.