.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ 4ರೂ ಏರಿಕೆ

ಬೆಂಗಳೂರು: ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಮತ್ತೆ ಬಿಗ್ ಶಾಕ್ ನೀಡಿದೆ. ನಂದಿನಿ ಪ್ಯಾಕೆಟ್ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ​ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.

ಇದೀಗ ನಂದಿನ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗ್ರಾಹಕರಿಗೆ ಹಾಲು ಬಿಸಿತುಪ್ಪವಾಗಿದೆ.

No Comments

Leave A Comment