ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಶಾಕ್; ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ಒಂದೇ ದಿನ ಎರಡೇರಡು ಶಾಕ್ ನೀಡಿದ್ದು, ಗುರುವಾರ ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಿದ್ಯುತ್ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (KERC) ಇಂದು ಆದೇಶ ಹೊರಡಿಸಿದೆ.
ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಿಸಲಾಗಿದೆ. ಈ ವಿದ್ಯುತ್ ದರ ಏರಿಕೆಯು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.
ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್‌ಸಿ ತಿಳಿಸಿದೆ.
ರಾಜ್ಯದಲ್ಲಿ ದರ ಏರಿಕೆ ಸರಣಿ ಮುಂದುವರೆದಿದ್ದು, ಇತ್ತೀಚೆಗಷ್ಟೇ ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಇದೀಗ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.