ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಅಳವಡಿಸಿದ್ದ, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿಎನ್ ಗರುಡಾಚಾರ್ ವಿಧಿವಶ
ಬೆಂಗಳೂರು, ಮಾರ್ಚ್ 28: ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ತಂದೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ಶುಕ್ರವಾರ ವಿಧಿವಶರಾಗಿದ್ದಾರೆ . ಬೆಂಗಳೂರಿನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಟ್ರಾಫಿಕ್ ಡಿಸಿಪಿಯಾಗಿದ್ದರು. 1963ರಲ್ಲಿ N.R.ಜಂಕ್ಷನ್‌ನಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆಯಾಗಿತ್ತು. ನಗರದ ನಿವಾಸದಲ್ಲಿ ಬಿ.ಎನ್.ಗರುಡಾಚಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿ.ಎನ್.ಗರುಡಾಚಾರ್ ಅವರು ಬೆಂಗಳೂರು ಕಮಿಷನರ್ ಸೇರಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಮೊದಲ ಟ್ರಾಫಿಕ್ ಸಿಗ್ನಲ್ ಸ್ಥಾಪನೆ ಮಾಡಿದಾಗ ಗರುಡಾಚಾರ್ ಅವರು ಟ್ರಾಫಿಕ್ ಡಿಸಿಪಿ ಆಗಿದ್ದರು.