......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!
ಕುಂದಾಪುರ : ಕಾರು ಮತ್ತು ಸ್ಕೂಟರ್ ನಡುವೆ ಢಿಕ್ಕಿ : ಇಬ್ಬರು ಸಾವು
ಕುಂದಾಪುರ: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಸ್ರೂರು ಸಮೀಪದ ಬಳ್ಕೂರು ಬಿ.ಹೆಚ್. ಶಾಲೆ ಬಳಿ ನಡೆದಿದೆ.
ಸಾವನ್ನಪ್ಪಿದ ಸ್ಕೂಟರ್ ಸವಾರರನ್ನು ಬಳ್ಕೂರಿನ ರಾಜೀವ ಶೆಟ್ಟಿ(50) ಹಾಗೂ ಸುಧೀರ್ ದೇವಾಡಿಗ(35) ಎಂದು ತಿಳಿದು ಬಂದಿದೆ.
ಅಭಿಷೇಕ್ ಶೆಟ್ಟಿ ಎನ್ನುವ ವ್ಯಕ್ತಿ ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದ ಮಾರುತಿ ಸಿಫ್ಟ್ ಕಾರೊಂದು ಬಸ್ರೂರುಯಿಂದ ಕಂಡ್ಲೂರು ಕಡೆಗೆ ಹೋಗುತ್ತಿದ ಸ್ಕೂಟರ್ ಗೆ ನೇರ ಢಿಕ್ಕಿ ಹೊಡೆದಿದೆ.
ಢಿಕ್ಕಿ ರಭಸಕ್ಕೆ ಸ್ಕೂಟರ್ ಸವಾರರು ಗಂಭೀರ ಗಾಯಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸಿದ್ದಾರೆ.