ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊಳ್ಳಲಿದೆ.ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಸದ್ಯದಲ್ಲೇ ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಕರ್ನಾಟಕ ಪೊಲೀಸರ ತಲೆ ಅಲಂಕರಿಸಲಿದೆ ಸ್ಮಾರ್ಟ್​ ಹ್ಯಾಟ್​

ಬೆಂಗಳೂರು, ಮಾರ್ಚ್ 30: ಕರ್ನಾಟಕ ಪೊಲೀಸ್​ ಇಲಾಖೆಯ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳು ಈಗಲೂ ಬ್ರಿಟಿಷ್​ ಕಾಲದ ಟೋಪಿಯನ್ನು  ಧರಿಸುತ್ತಾರೆ. ಈ ಟೋಪಿ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದು ಪೊಲೀಸರ ಬಹುವರ್ಷಗಳ ಬೇಡಿಕೆ ಕೂಡ ಆಗಿತ್ತು. ಇದೀಗ ಅದಕ್ಕೆ ಸಮಯ ಬಂದಿದ್ದು, ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್​​ ಪೀಕ್​ ಹ್ಯಾಟ್​ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ.

ಅನಾದಿ ಕಾಲದಿಂದಲೂ ಬಳಸಿಕೊಂಡು ಬರುತ್ತಿರುವ ಟೋಪಿಯಿಂದ ಸಮಸ್ಯೆ ಜಾಸ್ತಿ ಎನ್ನಲಾಗುತ್ತಿದೆ. ರ್ಯಾಲಿ, ಪ್ರತಿಭಟನೆ ಅಥವಾ ಲಾಟಿ ಚಾರ್ಜ್​ ಸಂದರ್ಭಗಳಲ್ಲಿ ಕಿರಿಕಿರಿ ಉಂಟಾಗುತ್ತಿದೆ. ತಲೆ ಮೇಲೆ ಸರಿಯಾಗಿ ನಿಲ್ಲಲ್ಲ. ಒಂದು ವೇಳೆ ಓಡುವಾಗ ಕೆಳಗೆ ಬಿದ್ದರೆ ಸಾರ್ವಜನಿಕವಾಗಿ ಅವಮಾನವಲ್ಲದೇ, ಇಲಾಖೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಹಾಗಾಗಿ ಟೋಪಿ ಬದಲಾವಣೆಗೆ ಅನೇಕ ವರ್ಷಗಳಿಂದ ಪೊಲೀಸರು ಬೇಡಿಕೆ ಇಡುತ್ತಿದ್ದರೂ ಈಡೇರಿರಲಿಲ್ಲ.

  

 

 

 

ಪ್ರಸ್ತುತ ಪೊಲೀಸ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಗ್ಲೋಚ್ ಟೋಪಿಯಿಂದಾಗಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಇನ್ನು ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್‌ಗಳಿಗೆ ಪೀಕ್ ಕ್ಯಾಪ್‌ಗಳನ್ನು ನೀಡಲಾಗಿದೆ. ಸದ್ಯ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ನೀಡುವ ಕುರಿತಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಡಿಜಿ-ಐಜಿಪಿ ಡಾ. ಅಲೋಕ್​ ಮೋಹನ್ ಸೂಚಿಸಿದ್ದಾರೆ.​

ಆಗಾಗ ಈ ಬಗ್ಗೆ ಚರ್ಚೆಯಾಗುತ್ತಿದ್ದರು ಅನುಷ್ಠಾನಕ್ಕೆ ಬಂದಿರಲಿಲ್ಲ. ಇದೀಗ ಡಿಜಿ-ಐಜಿಪಿ ಸೂಚನೆ ಬೆನ್ನಲ್ಲೇ ಪೀಕ್ ಟೋಪಿ ವಿತರಣೆ ಬಗ್ಗೆ ಚರ್ಚಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್​ಆರ್​ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಏಪ್ರಿಲ್​ 4ರಂದು ಕಿಟ್ ನಿರ್ದಿಷ್ಟತಾ ಸಮಿತಿ ಸಭೆ ಕರೆಯಲಾಗಿದೆ. ಪ್ರಧಾನ ಕಚೇರಿ ಐಜಿಪಿ, ಬೆಂಗಳೂರು ಉತ್ತರ ವಿಭಾಗ, ಆತ್ಮೀಯ ವಿಭಾಗ ಹಾಗೂ ಸಿಎಆರ್ ಡಿಸಿಪಿಗಳು, ಜೊತೆಗೆ ಬೆಂಗಳೂರು ನಗರ ಜಿಲ್ಲೆ ಎಸ್​​ಪಿ, ಕೆಎಸ್​ಆರ್​ಪಿ ಕಮಾಂಡೆಂಟ್​ ಸೇರಿ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸಾಧಕ-ವಾಧಕಗಳ ಬಗ್ಗೆ ಚರ್ಚೆ ನಡೆಯಲಿದ್ದು, ಪೀಕ್ ಕ್ಯಾಪ್ ಕೊಡಲು ಶಿಫಾರಸ್ಸು ಮಾಡುವ ಭರವಸೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment