ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಚಿನ್ನ ಕಳ್ಳಸಾಗಣೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ ನಟಿ ರನ್ಯಾ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಮಂಗಳವಾರ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಈ ಹಿಂದೆ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು.

ಇದಕ್ಕು ಮುಂಚೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ರನ್ಯಾ ರಾವ್ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

No Comments

Leave A Comment