37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಡ್ಯ, ಏಪ್ರಿಲ್​ 03: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇನಲ್ಲಿ ಐರಾವತ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿ ಎಕ್ಸಿಟ್​ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಇಬ್ಬರು ಪುರುಷರ ಸಾವನ್ನಪ್ಪಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರ ಗುರುತು ಪತ್ತೆ ಆಗಿಲ್ಲ.

ಎಕ್ಸ್​ಪ್ರೆಸ್ ಹೈವೇಯಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿದೆ. ಹೀಗಾಗಿ ಮತ್ತೆ ಎಕ್ಸ್​ಪ್ರೆಸ್ ಹೈವೇಗೆ ಚಾಲಕ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್​​ಆರ್​ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ದುರ್ಘಟನೆ ಸಂಭವಿಸಿದ್ದು, ಐರಾವತ ಬಸ್ ಡಿಕ್ಕಿ ರಭಸಕ್ಕೆ ಟಾಟಾ ಪಂಚ್​ ಕಾರು (KA 09, MG 4263) ಸಂಪೂರ್ಣ ನಜ್ಜುಗುಜ್ಜಾಗಿದೆ.

No Comments

Leave A Comment