ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ
ಗುಜರಾತ್ನಲ್ಲಿ ಐಎಎಫ್ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಗುಜರಾತ್, ಏಪ್ರಿಲ್ 03: ಗುಜರಾತ್ನ ಜಾಮ್‌ನಗರದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಒಬ್ಬ ಪೈಲಟ್ ಸಾವನ್ನಪ್ಪಿದ್ದಾರೆ.
ಮತ್ತೊಬ್ಬ ಪೈಲಟ್ ನನ್ನು ರಕ್ಷಿಸಲಾಗಿದೆ. ಜಾಮ್‌ನಗರ ಎಸ್‌ಪಿ ಈ ಘಟನೆಯನ್ನು ದೃಢಪಡಿಸಿದ್ದಾರೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು ಎಂದು ಜಾಮ್‌ನಗರ ಎಸ್‌ಪಿ ಪ್ರೇಮ್‌ಸುಖ್ ದೇಲು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದಾಗ, ಒಬ್ಬ ಪೈಲಟ್ ವಿಮಾನದಿಂದ ಜಿಗಿದಿದ್ದು, ಮತ್ತೊಬ್ಬ ಪೈಲಟ್ ಸಾವನ್ನಪ್ಪಿದ್ದಾರೆ. ಗಾಯಗೊಂಡ ಪೈಲಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿದೆ. ಜಾಮ್‌ನಗರ ನಗರದಿಂದ 12 ಕಿ.ಮೀ ದೂರದಲ್ಲಿರುವ ಸುವರ್ದಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವೀಡಿಯೊ ಕೂಡ ಹೊರಬಂದಿದ್ದು, ಅದನ್ನು ನೋಡಿದರೆ ಹೊಲದಲ್ಲಿ ಬೆಂಕಿ ಹೊತ್ತಿಕೊಂಡಿರುವಂತೆ ತೋರುತ್ತದೆ.