ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕನ್ನಡಪರ ಹೋರಾಟಗಾರ, ಸಾಹಿತಿ ಪಿವಿ ನಾರಾಯಣ ನಿಧನ
ಬೆಂಗಳೂರು: ಕಳೆದ 50 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ, ಸಂಶೋಧಕ ಹಾಗೂ ಸಾಹಿತಿ ಪಿ ವಿ ನಾರಾಯಣ ಅವರು ಗುರುವಾರ ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
1942 ರಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ಜನಿಸಿದ ನಾರಾಯಣ ಅವರು ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ನಾರಾಯಣ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.
ನಾರಾಯಣ ಅವರು ಅನುವಾದಕರಾಗಿ ಇಂಗ್ಲಿಷ್ ಮತ್ತು ತೆಲುಗಿನಿಂದ 22 ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡಕ್ಕೆ ಭಾಷಾಂತರ ಮಾಡಿದ್ದಾರೆ.
ಬೆಂಗಳೂರಿನ ವಿಜಯ ಕಾಲೇಜಿನಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕನ್ನಡ ಅಧ್ಯಾಪಕರಾಗಿದ್ದ ನಾರಾಯಣ ಅವರು, 1980 ರ ದಶಕದಲ್ಲಿ ಗೋಕಾಕ್ ಚಳುವಳಿಯಿಂದ ಪ್ರಾರಂಭಿಸಿ ಕಳೆದ ಅರ್ಧ ಶತಮಾನದಲ್ಲಿ ನಡೆದ ಬಹುತೇಕ ಎಲ್ಲಾ ಕನ್ನಡಪರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಟ್ಯಾಗ್ ಪಡೆಯುವ ಹೋರಾಟದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
ನಾರಾಯಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
“ಹಿರಿಯ ಬರಹಗಾರ ಮತ್ತು ಸಂಶೋಧಕ ಡಾ ಪಿ ವಿ ನಾರಾಯಣ ಅವರ ನಿಧನದಿಂದ ನನಗೆ ದುಃಖವಾಗಿದೆ. ಕನ್ನಡಕ್ಕಾಗಿ ಹೋರಾಡುವುದರ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ಮುಂಚೂಣಿಯಲ್ಲಿದ್ದ ನಾರಾಯಣ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.