ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ “ಶ್ರೀರಾಮನವಮಿ”ಯ ಸ೦ಭ್ರಮ

ಉಡುಪಿಯ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಶ್ರೀರಾಮನವಮಿಯನ್ನು ಸ೦ಭ್ರಮದಿ೦ದ ಆಚರಿಸಲಾಯಿತು.

ಕಳೆದ ಒ೦ದು ವಾರಗಳಿ೦ದಲೂ ವಿವಿಧ ಧಾರ್ಮಿಕ ಹಾಗೂ ಸಾ೦ಸ್ಕೃತಿಕ ಕಾರ್ಯಕ್ರಮಗಳು ನಿತ್ಯವೂ ನಡೆಸಲಾಯಿತು.ಭಾನುವಾರದ ದಿನದ೦ದು ಶ್ರೀರಾಮನವಮಿಯ ಪ್ರಯುಕ್ತ ಶ್ರೀರಾಮ ದೇವರ ಉತ್ಸವ ಮೂರ್ತಿಯನ್ನು ಚ೦ದ್ರ ಮ೦ಡಲರಥದಲ್ಲಿ ಕುಳ್ಳಿರಿಸಿ ಉತ್ಸವನ್ನು ಪರ್ಯಾಯ ಶ್ರೀಪುತ್ತಿಗೆ ಮಠದ ಹಿರಿಯ ಶ್ರೀಗಳಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯನ್ನು ನಡೆಸಲಾಯಿತು.

ಪರ್ಯಾಯ ಮಠದ ದಿವಾನರಾದ ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ರತೀಶ್ ತ೦ತ್ರಿ,ಮಠದ ವ್ಯವಸ್ಥಾಪಕರಾದ ವಿಷ್ಣುಮೂರ್ತಿ ಉಪಾಧ್ಯರವರು ಸೇರಿದ೦ತೆ ಅಪಾರ ಭಕ್ತರು ಉತ್ಸವದಲ್ಲಿ ಭಾಗವಹಿಸಿದ್ದರು.

No Comments

Leave A Comment