ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಹುಬ್ಬಳ್ಳಿ: ಡಿವೈಡರ್‌ಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ಭಾನುವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಸುಜಾತಾ ಹಿರೇಮಠ(60), ಗಾಯತ್ರಿ ಮಾಂತನಮಠ(67), ಶಕುಂತಲಾ ಹಿರೇಮಠ(72) ಸಂಪತ್​ ಕುಮಾರಿ (63) ಎಂದು ಗುರುತಿಸಲಾಗಿದೆ.

ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದುಬಂದಿದ್ದು, ಅಪಘಾತದಲ್ಲಿ ಗಾಯಗೊಂಡ ಕಾರು ಚಾಲಕ ವಿರೇಶ್​ ಹಿರೇಮಠ(65) ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿಯಿಂದ ಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಸಂಪತ್​ ಕುಮಾರಿ ಮತ್ತು ವಿರೇಶ್​ ಹಿರೇಮಠ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಪತ್​ ಕುಮಾರಿ ಮೃತಪಟ್ಟಿದ್ದಾರೆ. ವಿರೇಶ್​ ಹಿರೇಮಠ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

No Comments

Leave A Comment