ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ....ಚಿತ್ತಾಪುರದಲ್ಲಿ RSS ಪಥ ಸಂಚಲನ: ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕ ನಿಗದಿಪಡಿಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಮೋಡ ಕವಿದ ವಾತಾವರಣ, ಸಾಧಾರಣ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯ ಕೆಲ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40 ಕಿ.ಮೀ ವೇಗದ ಗಾಳಿ ಬೀಸುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ.
ಬಿರುಗಾಳಿಯ ಸಮಯದಲ್ಲಿ ಜನರು ಮನೆಯೊಳಗೆ ಇರಲು ಮತ್ತು ತೀವ್ರ ಮಳೆಯ ಸಮಯದಲ್ಲಿ ಪ್ರಯಾಣ ತಪ್ಪಿಸಲು ಸೂಚಿಸಲಾಗಿದೆ ಎಂದು KSNDMC ತಿಳಿಸಿದೆ, ಬೆಂಗಳೂರು ಮತ್ತು ಹತ್ತಿರದ ಪ್ರದೇಶಗಳಲ್ಲಿ ಗುಡುಗು ಸಹಿತ ಬಿರುಗಾಳಿ ಬೀಸುವ ಬಗ್ಗೆ ಎಚ್ಚರಿಕೆ ನೀಡಿದೆ.
KSNDMCಯ ಐದು ದಿನಗಳ ಹವಾಮಾನ ಮುನ್ಸೂಚನೆಯ ಪ್ರಕಾರ, ಸೋಮವಾರದವರೆಗೆ ಕರ್ನಾಟಕದಾದ್ಯಂತ ಮೋಡ ಕವಿದ ವಾತಾವರಣವಿರುತ್ತದೆ, ಗುಡುಗು, ಮಿಂಚು ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಭಾರತ ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರುತ್ತದೆ. “ಮಳೆ ಬರುವ ಸಾಧ್ಯತೆ ಇಲ್ಲ, ಕನಿಷ್ಠ ತಾಪಮಾನವು ಕನಿಷ್ಠ 21-22 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ” ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.