ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
PUC ಆರ್ಟ್ಸ್ ವಿಭಾಗದಲ್ಲಿ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಲಾರಿ ಚಾಲಕನ ಪುತ್ರಿ!
ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್‌ನಲ್ಲಿ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ.
ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ನಿರ್ಮಲಾ ಕಲಾ ವಿಭಾಗದಲ್ಲಿ 600ಕ್ಕೆ 596 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.