ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಸಿದ್ದರಾಮಯ್ಯ ಕೇವಲ ಮುಸಲ್ಮಾನರಿಗೆ ಮಾತ್ರ ಮುಖ್ಯಮಂತ್ರಿ:ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಉಡುಪಿ: ಸಿದ್ದರಾಮಯ್ಯ ನಾಡಿನ ಮುಖ್ಯಮಂತ್ರಿ ಅಲ್ಲ, ಕೇವಲ ಮುಸಲ್ಮಾನರಿಗೆ ಮಾತ್ರ ಮುಖ್ಯಮಂತ್ರಿ. ಕೇವಲ ಸಾಯ್ಬರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ಭಾವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿ ಕಡಿಯಾಳಿಯ ಬಿಜೆಪಿ ಕಚೇರಿಯ ಮುಂಭಾಗದ ಮೈದಾನದಲ್ಲಿ ಗುರುವಾರ ಆಯೋಜಿಸಿದ “ಜನಾಕ್ರೋಶ ಯಾತ್ರೆ”ಯ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಸಲ್ಮಾನ ಹೆಣ್ಣು ಮಕ್ಕಳ ಆತ್ಮ ಸಂರಕ್ಷಣೆಗೆ ಹಣ ಇಟ್ಟಿದ್ದಾರೆ. ಆದರೆ, ಲವ್ ಜಿಹಾದಿಗೆ ಬಲಿಯಾಗುತ್ತಿರುವುದು ಹಿಂದೂ ಹೆಣ್ಣು ಮಕ್ಕಳು. ಹೀಗಾಗಿ ಹಿಂದು ಹೆಣ್ಣು ಮಕ್ಕಳ ರಕ್ಷಣೆಗೆ ಸರಕಾರ ಹಣ ನೀಡಬೇಕಾಗಿದೆ. ರಾಜ್ಯ ಸರ್ಕಾರದ ಆಡಳಿತ ವೈಖರಿ ನೋಡಿದರೆ ಇದು ಜನಪ್ರಿಯ ಸರಕಾರ ಅಲ್ಲ. ಇದು ಕೇವಲ ಜಾಹಿರಾತಿನ ಸರಕಾರ. ಇದು ಬಡವರ ಪರವಾಗಿ ಇರುವ ಸರ್ಕಾರ ಅಲ್ಲ. ಬೆಲೆ ಏರಿಕೆ ಮೂಲಕ ಬಡವರಿಗೆ ಬರೆ ಎಳೆಯುವ ಸರಕಾರ. ಇದು ಅಭಿವೃದ್ಧಿ ಶೂನ್ಯ ಸರ್ಕಾರ. ಅಹಿಂದ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಸಿಎಂ ಕುರ್ಚಿಯಲ್ಲಿ ಕೂತಿದ್ದಾರೆ. ಆದರೆ ಹಿಂದುಳಿದ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಸಿದ್ದರಾಮಯ್ಯ ಕೇವಲ ಅಲ್ಪಸಂಖ್ಯಾತರ ಹಿಂದೆ ಹೋಗುತ್ತಿದ್ದಾರೆ. ಇದು ಹಿಂದೂ ವಿರೋಧಿ ಸರ್ಕಾರ. ನಮ್ಮ ಹೋರಾಟ ರಾಜಕೀಯ ಗಿಮಿಕ್ ಅಲ್ಲ. ಈಗ ಯಾವುದೇ ಚುನಾವಣೆ ಇಲ್ಲ. ಸಿದ್ದರಾಮಯ್ಯ ಚುನಾವಣೆಗೆ ಮುಂಚೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಮಾಡಿದರು. ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಮಾಡಿದರು. ಇಬ್ಬರೂ ಕೂಡ ನೀರಾವರಿಗೆ ಯಾವುದೇ ಯೋಜನೆ ಕೊಟ್ಟಿಲ್ಲ. ರಾಜ್ಯದಲ್ಲಿ ಉಡುಪಿ ಜಿಲ್ಲೆ ಎಲ್ಲಿದೆ ಗೊತ್ತಿದ್ಯಾ?. ಯಡಿಯೂರಪ್ಪ ಸಿಎಂ ಇದ್ದಾಗ ಕರಾವಳಿ ಅಭಿವೃದ್ಧಿ ಆಯ್ತು. ಮುಖ್ಯಮಂತ್ರಿಗಳೇ ಎಷ್ಟು ಬಾರಿ ಉಡುಪಿಗೆ ಬಂದಿದ್ದೀರಿ ? ಎಷ್ಟು ಕೋಟಿ ಅನುದಾನ ಕೊಟ್ಟಿದ್ದೀರಿ? ಎಂದು ಪ್ರಶ್ನಿಸಿದರು.
ಕಾಪು ಮಾರಿಯಮ್ಮನ ದೇಗುಲಕ್ಕೆ ಅನುದಾನ ಕೇಳಿ ಐದು ಬಾರಿ ಹೋಗಿದ್ದರಂತೆ. ಆದರೆ ಒಂದು ನಯಾ ಪೈಸೆ ಅನುದಾನ ನೀಡಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ದೇವಸ್ಥಾನ ಮಠಮಾನ್ಯಗಳಿಗೆ ಅನುದಾನ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ಸರಕಾರ ಮೌಲ್ವಿಗಳ ಸಂಬಳ ಜಾಸ್ತಿ ಮಾಡಿದರು. ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಂರಿಗೆ ನಾಲ್ಕು ಪರ್ಸೆಂಟ್ ಜಾಸ್ತಿ ಮಾಡಿದ್ದಾರೆ.
ಈ ಬಗ್ಗೆ ಬಿಜೆಪಿ ಶಾಸಕರು ಹೋರಾಟ ಮಾಡಿದ್ದಾರೆ. ಹೋರಾಟ ಮಾಡಿದ ಶಾಸಕರನ್ನು ಆರು ತಿಂಗಳು ಸಸ್ಪೆಂಡ್ ಮಾಡಿದ್ದಾರೆ. ಪುಣ್ಯಾತ್ಮ ಸ್ಪೀಕರ್ ಈ ಕೆಲಸ ಮಾಡಿದ್ದಾರೆ. ಇವರು ಸಂವಿಧಾನ ಅಂಬೇಡ್ಕರ್ ಬಗ್ಗೆ ಮಾತನಾಡುತ್ತಾರೆ. ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡು ಮೋಸ ಮಾಡಿದ ಪಕ್ಷ ಕಾಂಗ್ರೆಸ್. ಶೈಕ್ಷಣಿಕ ಸಾಮಾಜಿಕವಾಗಿ ಮೇಲೆತ್ತುವ ಕೆಲಸ ಮಾಡಿಲ್ಲ ಎಂದು ಗುಡುಗಿದರು.