ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
‘ಅಂಬೇಡ್ಕರ್ ತತ್ವಾದರ್ಶಗಳು ‘ಆತ್ಮನಿರ್ಭರ್’ ಭಾರತದ ನಿರ್ಮಾಣಕ್ಕೆ ಸಹಕಾರಿ’- ಪ್ರಧಾನಿ ಮೋದಿ
ನವದೆಹಲಿ:ಏ.14.’ಅಂಬೇಡ್ಕರ್ ಅವರ ತತ್ವಾದರ್ಶಗಳು ‘ಆತ್ಮನಿರ್ಭರ್’ ಭಾರತದ ನಿರ್ಮಾಣಕ್ಕೆ ಸಹಕಾರಿಯಾಗಲಿವೆ’ ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಹಲವು ಗಣ್ಯರು ಸಂಸತ್ ಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಇಂದು ಪುಷ್ಪ ನಮನ ಸಲ್ಲಿಸಿದ್ದಾರೆ.
ತೀವ್ರ ಸಂಕಷ್ಟಗಳ ನಡುವೆಯು ಅಸಾಧಾರಣ ಸಾಧನೆ ಮಾಡುವ ಮೂಲಕ ಅಂಬೇಡ್ಕರ್ ಅವರು ಜಾಗತಿಕ ಮನ್ನಣೆ ಗಳಿಸಿದ್ದಾರೆ. ದೀನ ದಲಿತರ ಸಬಲೀಕರಣಕ್ಕೆ ಶಿಕ್ಷಣವೊಂದೇ ಮಾರ್ಗವೆಂದು ಅವರು ಪ್ರತಿಪಾದಿಸಿದ್ದರು’ ಎಂದು ಮುರ್ಮು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಅಂಬೇಡ್ಕರ್ ಅವರ ಹೋರಾಟವು ಸಂವಿಧಾನ ರಕ್ಷಿಸುವ ಹೋರಾಟದಲ್ಲಿ ನಮಗೆ ಯಾವಾಗಲೂ ಮಾರ್ಗದರ್ಶನ ನೀಡುತ್ತದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.