ಏನಿದು ಪ್ರಕರಣ?
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಅಸೋಸಿಯೇಟೆಡ್ ಲಿಮಿಟೆಡ್ ಜರ್ನಲ್ (ಎಜೆಎಲ್) ಒಡೆತನದಲ್ಲಿದೆ. ಎಜೆಎಲ್‌ಗೆ ಎಐಸಿಸಿ ಮೂಲಕ 90 ಕೋಟಿ ರು.ಸಾಲ ನೀಡಲಾಗಿತ್ತು. ಆದರೆ ಅದು ಸಾಲ ಮರುಪಾವತಿ ಮಾಡಿರಲಿಲ್ಲ. ಆದರೆ ಎಜೆಎಲ್ 2000 ಕೋಟಿ ರು. ಆಸ್ತಿ ಹೊಂದಿತ್ತು. ಈ ನಡುವೆ ಎಜೆಎಲ್ ಆಸ್ತಿಯನ್ನು ಕಡಿಮೆ ತೋರಿಸಿ, ಕೇವಲ 50 ಲಕ ರು.ಗೆ ಯಂಗ್ ಇಂಡಿಯನ್ ಎಂಬ ಕಂಪನಿಗೆ ಎಜೆಎಲ್ ಅನ್ನು ಮಾರಾಟ ಮಾಡಲಾಗಿತ್ತು.
ಇದರಲ್ಲಿ ಸೋನಿಯಾ, ರಾಹುಲ್ ಒಟ್ಟು ಶೇ.76ರಷ್ಟು ಷೇರು ಹೊಂದಿದ್ದಾರೆ. ಇದು ಎಜೆಎಲ್ ಆಸ್ತಿ ಕಬಳಿಸಲು ನಡೆಸಿದ ಅಕ್ರಮ ಎಂದು ಆರೋಪಿಸಿ ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ 2014ರ ಜೂನ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ತನಿಖೆ ನಡೆಸುವಂತೆ ಇ.ಡಿ.ಗೆ ಆದೇಶಿಸಿತ್ತು.ಇ.ಡಿ. 2021ರಲ್ಲಿ ತನ್ನ ತನಿಖೆಯನ್ನು ಪ್ರಾರಂಭಿಸಿತು.