ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮಲ್ಪೆ ಹೊಟೇಲ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ. ವೆಚ್ಚದ ವಸ್ತುಗಳು ಸುಟ್ಟು ಕರಕಲು

ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾದ ಘಟನೆ ಉಡುಪಿಯ  ಮಲ್ಪೆ ಬೀಚ್ ಬಳಿ ಹೊಟೇಲ್ ನಲ್ಲಿ ನಡೆದಿದೆ.

ಸಚಿನ್ ಅವರ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಐದಾರು ಫ್ರಿಡ್ಜ್, ಗ್ರೈಂಡರ್, ಪಾತ್ರೆ, ದಿನಸಿ ಬೆಂಕಿಗಾಹುತಿಯಾಗಿದ್ದು, ಸುಮಾರು 15 ಲಕ್ಷ ರೂಪಾಯಿ ವೆಚ್ಚದ ವಸ್ತುಗಳು ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

ಹೋಟೆಲ್ ಬಂದ್ ಮಾಡಿ ಹೋದ ನಂತರ ಫ್ರಿಡ್ಜ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ. ಅಗ್ನಿಶಾಮಕ ದಳದಿಂದ ಬೆಂಕಿ ಹರಡದಂತೆ ರಕ್ಷಣಾ ಕಾರ್ಯ ನಡೆಸಿದರು.

No Comments

Leave A Comment