.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ  ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ವಯಸ್ಸಿನ ಮಿತಿಯ ಬಗ್ಗೆ ಎಲ್ಲರೂ ಒತ್ತಡ ಹೇರುತ್ತಾ ಇದ್ದರು. ಈ ವಿಚಾರದಲ್ಲಿ ಪೋಷಕರಿಗೆ ಒಂದು ಮನವಿಯನ್ನು ಮಾಡುತ್ತಿದ್ದೇನೆ. ಮಕ್ಕಳನ್ನು ಯಂತ್ರದ ತರ ಓದಿಸಬೇಡಿ. ಹಾಗೆ ಮಾಡಿದರೆ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತದೆ ಎಂದರು.

ವಯೋಮಿತಿ ವಿಚಾರದಲ್ಲಿ ಪೋಷಕರು ಗೊಂದಲದಲ್ಲಿದ್ದಾರೆ. ದೇಶದಲ್ಲಿ ಎಲ್ಲ ಕಡೆಗಳಲ್ಲಿ ಒಂದನೇ ತರಗತಿ ಸೇರ್ಪಡೆಗೆ ಆರು ವರ್ಷ ವಯೋಮಿತಿ ಇದೆ. ಎರಡು ತಿಂಗಳು ಮಾತ್ರ ಸಡಿಲಿಕೆ ಮಾಡಬಹುದಷ್ಟೆ. ನಮ್ಮದು ಎಸ್‌ಇಪಿ ಇರುವುದರಿಂದ, ಅವರ ಬಳಿ ಕೇಳಿದಾಗ, ಮಕ್ಕಳು ಕಡಿಮೆ ವಯಸ್ಸಿನಲ್ಲೇ ಸೇರಿಕೊಳ್ಳುತ್ತಿದ್ದಾರೆ ಎಂದಿದ್ದರು ಎಂದು ಸಚಿವರು ತಿಳಿಸಿದರು.

No Comments

Leave A Comment