ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ ರೂ
ಮಂಗಳೂರು, ಏಪ್ರಿಲ್ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳ ಸಾಧ್ಯತೆ ಎನ್ನಲಾಗುತ್ತಿದೆ.