.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ: ವಾರ್ಷಿಕ ಆದಾಯ 155.95 ಕೋಟಿ ರೂ

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳ ಸಾಧ್ಯತೆ ಎನ್ನಲಾಗುತ್ತಿದೆ.

No Comments

Leave A Comment