......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

ರಾಯಚೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು, ಏಪ್ರಿಲ್​ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುವ ಕುರಿ ಸಂತೆಗೆ ಹೋಗುವ  ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿದ್ದ ಹಿನ್ನಲೆ ನಿಯಂತ್ರಣ ತಪ್ಪಿ ಹಳ್ಳದ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕ ಆನಂದ್​​ಗೆ ಗಂಭೀರ ಗಾಯವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಗಾಯಾಳು ಆನಂದ್ ಹೇಳಿದ್ದಿಷ್ಟು 

ಘಟನೆ ಬಗ್ಗೆ ಗಾಯಾಳು ಆನಂದ್ ಟಿವಿ9 ಗೆ ಪ್ರತಿಕ್ರಿಯಿಸಿದ್ದು, ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರಕ್ಕೆ ಕುರಿ ಖರೀದಿಗೆ ಹೋಗಿದ್ದೆವು. ರಾತ್ರಿ 10 ಕ್ಕೆ ಊಟ ಮಾಡಿ ಮಲಗಿದ್ದೆವು. ವಾಹನ ಯಾರು ಓಡಿಸುತ್ತಿದ್ದರು ಗೊತ್ತಿಲ್ಲ. ತಡ ರಾತ್ರಿ ಪೊಲೀಸರು ಬಂದು ನೀರು ಕುಡಿಸಿದಾಗ ಎಚ್ಚರವಾಗಿದೆ. ಕಾಲಿಗೆ ಗಂಭೀರಗಾಯವಾಗಿದೆ ಅಂತ ಹೇಳಿದ್ದಾರೆ.

No Comments

Leave A Comment