ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪರೈ ಎರಡನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

ರಾಮನಗರ: ಭೂಗತ ಲೋಕದ ಮಾಜಿ ಡಾನ್‌ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು ನೀಡಿದ ದೂರಿನ ಮೇರೆಗೆ ಮುತ್ತಪ್ಪ ರೈಗೆ ಆಪ್ತವಾಗಿದ್ದ ರಾಕೇಶ್ ಮಲ್ಲಿ, ರೈ ಅವರ ಎರಡನೇ ಪತ್ನಿ ಅನುರಾಧ, ನಿತೇಶ್ ಎಸ್ಟೇಟ್ ಮಾಲೀಕರಾದ ನಿತೇಶ್ ಶೆಟ್ಟಿ, ವೈದ್ಯನಾಥನ್ ಹಾಗೂ ಸಹಚರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್​ ಬ್ಯುಸಿನೆಸ್​ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆ ವೇಳೆ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿದೆ.

ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್​, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

No Comments

Leave A Comment